ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಶೀಘ್ರವೇ 13,500 ಶಿಕ್ಷಕರ ನೇಮಕಾತಿ



ಉಡುಪಿ:

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಕೊರತೆ ಇದ್ದು, ಹೈಕೋರ್ಟ್ ತೀರ್ಮಾನಕ್ಕನುಗಣುವಾಗಿ 13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಒಟ್ಟು 32 ಸಾವಿರ ಶಿಕ್ಷಕರಿಗೆ ಕೋರಿಕೆ ವರ್ಗಾವಣೆ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಸೆಪ್ಟೆಂಬರ್ 5 ರಿಂದ ಎಲ್ಲಾ ಶಾಲೆಗಳಲ್ಲೂ ಸಂವಿಧಾನ ಓದು ನಡೆಯಲಿದೆ ಎಂದು ತಿಳಿಸಿದ್ದಾರೆ.

Post a Comment (0)
Previous Post Next Post

Responsive Ads

Responsive Ads