ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ



ಬೆಂಗಳೂರು:


ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ…


ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ 10, 15, 20, 25 ವರ್ಷಗಳ ಕಾಲಮಿತಿ ಬಡ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಪದವಿ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದೆ.


ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜೊತೆಗೆ ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಮಹತ್ವದ ಸಭೆ ನಡೆಸಿದರು.


ಈ ಸಭೆಯಲ್ಲಿ ಕಾಲ ಮಿತಿಯೊಳೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಸಮ್ಮತಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.


ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲು, 1-8-2008ರ ನಂತ್ರ ನೇಮಕವಾಗಿರುವ ಉಪನ್ಯಾಸಕರಿಗೆ ಒಂದು ವರ್ಷ ವಿಶೇಷ ವೇತನ ಬಡ್ತಿ ಮಂಜೂರು ಮಾಡಲಾಗುವುದು. ಇನ್ನುಳಿದ ವಿವಿಧ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

Post a Comment (0)
Previous Post Next Post

Responsive Ads

Responsive Ads