Sunday, 3 September 2023

ಶಾಲಾ ಶಿಕ್ಷಕಿ ಜ್ಯೋತಿ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು



ನಾಡು ಮಾಹಿತಿ:

ಶಾಲಾ ಶಿಕ್ಷಕಿ ಜ್ಯೋತಿ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು.

ಕಾರ್ಕಳ ತಾಲೂಕಿನ ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಜ್ಯೋತಿ B ಅವರನ್ನು ಸರಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೇಳಿದ್ದಾರೆ.


ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮತ್ತು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಅವರ ಮೇಲೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಇಲಾಖೆ ವಿಚಾರಣಾ ವರದಿಯನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಸರಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕಾರ್ಕಳ ತಾಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

0 Please Share a Your Opinion.: